ಚಿತ್ರದುರ್ಗ : ಪ್ರಸಕ್ತ ಸಾಲಿಗೆ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ.25,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/- ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸುತ್ತದೆ.
ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು.
ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು ಎಂದು ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ
إرسال تعليق