ಬೆಂಗಳೂರು : ಕಾಡು ಕುದುರೆ ಓಡಿ ಬಂದಿತ್ತ ಖ್ಯಾತಿಯ, ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.
ಅವರನ್ನು ಜಯನಗರದ ಶಾಂತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಹೃದಯಾಘಾತ ಆಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲು ಆ್ಯಂಬುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು.
ಆಗ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
إرسال تعليق