ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಆ.14ರಂದು ಕಾಸರಗೋಡು ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ

ಆ.14ರಂದು ಕಾಸರಗೋಡು ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ



ಕಾಸರಗೋಡು: ಭಾರತ ಸರ್ಕಾರದ ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯದ ಅಂಗೀಕಾರ ಪಡೆದ ಕೇರಳ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಇದೇ ಆಗಸ್ಟ್ 14 ರಂದು ವಿವಿಧ ವಯೋಮಿತಿಯ ಮಕ್ಕಳಿಗಾಗಿ ಯೋಗಾಸನ ಸ್ಪರ್ಧೆಯನ್ನು ಏರ್ಪಡಿಸಿದೆ. ಕಾಸರಗೋಡು ಕೂಡ್ಲು ಸಮೀಪದ ಋಷಿಕ್ಷೇತ್ರದಲ್ಲಿರುವ ಚೈತನ್ಯ ವಿದ್ಯಾಲಯದಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.


ಸಬ್ ಜೂನಿಯರ್, ಜೂನಿಯರ್ ಹಾಗೂ ಸೀನಿಯರ್ ವಿಭಾಗದಲ್ಲಿ ಒಟ್ಟು 5 ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಗುವುದು. ವಿಜೇತರಿಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇದೆ. 3 ನೇ ರಾಷ್ಟ್ರೀಯ ಯೋಗಾಸನ ಚ್ಯಾಂಪಿಯನ್ಷಿಪ್ ನ ಸ್ಪರ್ಧಾಳುಗಳ ಆಯ್ಕೆಗಾಗಿ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಸ್ಪರ್ಧೆ ನಡೆಯುತ್ತಿದೆ. ರಾಷ್ಟ್ರ ಮಟ್ಟದಲ್ಲಿ ವಿಜೇತರಿಗೆ ಮುಂದಿನ 36ನೇ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇದೆ.


ಸ್ಪರ್ಧೆಯ ಬಗ್ಗೆ ಮಾಹಿತಿ ಪಡೆಯಲು www.yogasanasport.in ಎಂಬ ವೆಬ್ ಸೈಟ್ ಸಂದರ್ಶಿಸಬಹುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಇಚ್ಛಿಸುವವರು ಜಿಲ್ಲಾ ಕಾರ್ಯದರ್ಶಿಯರನ್ನು 9446774845 ಸಂಪರ್ಕಿಸಬಹುದು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post