ಮಂಗಳೂರು: ಪ್ರಧಾನಿ ನರೇಂದ್ರ ಮೋದಿಜಿಯವರು ಸೆ. 2 ರಂದು ಮಂಗಳೂರಿಗೆ ಆಗಮಿಸಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ನವಮಂಗಳೂರು ಬಂದರಿನಲ್ಲಿ ಸಾಗರಮಾಲ ಯೋಜನೆಯ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಬಳಿಕ, ಕೂಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಶಾಸಕರಾದ ಡಾ.ಭರತ್ ಶೆಟ್ಟಿ ವೈ ಮುಂದಾಳತ್ವದಲ್ಲಿ, ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ ಮೈದಾನದಲ್ಲಿ ಬಿರುಸಿನಿಂದ ಸಿದ್ದತೆಗಳು ನಡೆಯುತ್ತಿದೆ.
ಕಾರ್ಯಕ್ರಮ ಯಶಸ್ವಿಗೊಳಿಸಲು ಹಾಗೂ ಪ್ರಧಾನಿಯವರ ಭದ್ರತಾ ವ್ಯವಸ್ಥೆಗಳ ಬಗ್ಗೆ ಶುಕ್ರವಾರ ಸಮಾಲೋಚನೆ ಮಾಡಲಾಯಿತು.
ಸಾರ್ವಜನಿಕರಿಗೆ ಪ್ರವೇಶ, ಪಾರ್ಕಿಂಗ್, ನಿರ್ಗಮನ ವ್ಯವಸ್ಥೆಯ ಬಗ್ಗೆ ಸ್ಥಳ ಗುರುತಿಸಲಾಯಿತು. ಸಂಸದರಾದ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ್ ಹೆಗ್ಡೆ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ ದಿನೇಶ್ ಕುಮಾರ್, ಇತರ ಪೊಲೀಸ್ ಅಧಿಕಾರಿಗಳು, ಟ್ರಾಫಿಕ್ ವಿಭಾಗದ ಅಧಿಕಾರಿಗಳು ಪಾಲ್ಗೊಂಡು ಸಲಹೆ ಸೂಚನೆ ನೀಡಿದರು. ಮನಪಾ ಸದಸ್ಯರು, ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
إرسال تعليق