ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಧಾನಿ ಭೇಟಿ ಹಿನ್ನೆಲೆ: ಶಾಸಕ ಡಾ ಭರತ್ ಶೆಟ್ಟಿ ಅವರಿಂದ ಸಭಾಂಗಣದ ಸಿದ್ಧತೆ ಪರಿಶೀಲನೆ

ಪ್ರಧಾನಿ ಭೇಟಿ ಹಿನ್ನೆಲೆ: ಶಾಸಕ ಡಾ ಭರತ್ ಶೆಟ್ಟಿ ಅವರಿಂದ ಸಭಾಂಗಣದ ಸಿದ್ಧತೆ ಪರಿಶೀಲನೆ


ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲು ಐದು ದಿನಗಳು ಮಾತ್ರ ಇದ್ದು ಬೃಹತ್ ಸಮಾವೇಶಕ್ಕೆ ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಮೈದಾನ ಸಿದ್ದಗೊಳ್ಳುತ್ತಿದೆ.


1.50 ಲಕ್ಷಕ್ಕೂ ಮೇಲ್ಪಟ್ಟು ಜನರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು ಬೇಕಾದ ಸಿದ್ದತೆಗಳನ್ನು ಮಾಡಲಾಗುತ್ತಿದೆ. ಬೃಹತ್ ವೇದಿಕೆ, ಸಭಾಂಗಣಕ್ಕೆ ಬೇಕಾದ ತಯಾರಿ ನಡೆಯುತ್ತಿದ್ದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿದರು.

ಸ್ಥಳೀಯ ಕಾರ್ಪೊರೇಟರ್ ಕಿರಣ್ ಕುಮಾರ್ ಕೋಡಿಕಲ್, ಜೊತೆಗೆ ಪ್ರಮುಖರು ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


0 Comments

Post a Comment

Post a Comment (0)

Previous Post Next Post