ಮಂಗಳೂರು: ಮಹಾನಗರ ಪಾಲಿಕೆಯ ಕಣ್ಣೂರು ವಾರ್ಡಿನ ವೀರನಗರ ನವಕೀರ್ತಿ ಯುವಕ ಮಂಡಲದ ಬಳಿ ಪೂರ್ಣಗೊಂಡ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕಣ್ಣೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದ ಜನರ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಈಡೇರಿಸಲು ಶ್ರಮವಹಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಚಂದ್ರಾವತಿ ವಿಶ್ವನಾಥ್, ಸ್ಥಳೀಯ ಬಿಜೆಪಿ ಮುಖಂಡರು, ಯುವಕ ಮಂಡಲದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment