ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವ್ಯಕ್ತಿಯ ಮೇಲೆ ಇಬ್ಬರು ದುಷ್ಕರ್ಮಿಗಳಿಂದ ರಾಡ್ ನಿಂದ ಹಲ್ಲೆ

ವ್ಯಕ್ತಿಯ ಮೇಲೆ ಇಬ್ಬರು ದುಷ್ಕರ್ಮಿಗಳಿಂದ ರಾಡ್ ನಿಂದ ಹಲ್ಲೆ

 


ಮಂಗಳೂರು: ನಿನ್ನೆ ಸಂಜೆ ವ್ಯಕ್ತಿಯ ಮೇಲೆ ಇಬ್ಬರು ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ನಡೆಸಿದ್ದು, ಹಲ್ಲೆಯಿಂದಾಗಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಬೋಳೂರಿನಲ್ಲಿ ನಿನ್ನೆ ಸಂಜೆ ನವೀನ್ ಸಾಲ್ಯಾನ್ ಎಂಬಾತನ ಮೇಲೆ ದೇವದಾಸ್ ಬೋಳೂರು ಮತ್ತು ಪುತ್ರ ಸಾಯಿ ಕಿರಣ್ ಎಂಬವರು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.


ಹಲ್ಲೆಗೊಳಗಾದ ನವೀನ್ ಅನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ರಾಡ್ ನಿಂದ ಹಲ್ಲೆಗೊಳಗಾದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಸ್ಥಿತಿಯಲ್ಲಿರುವುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಹಲ್ಲೆ ಮಾಡಿರುವ ದೇವದಾಸ್ ಹಾಗೂ ಸಾಯಿ ಕಿರಣ್ ಎಂಬವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.


0 تعليقات

إرسال تعليق

Post a Comment (0)

أحدث أقدم