ಪಣಂಬೂರು ಘಟಕದ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಪಡೆಯ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ 'ಆಜಾದೀ ಕಾ ಅಮೃತ ಮಹೋತ್ಸವ' ಅಭಿಯಾನದ ಅಂಗವಾಗಿ ಪಣಂಬೂರು ಘಟಕದಲ್ಲಿ 'ಹರ್ ಘರ್ ತಿರಂಗಾ' ಅಭಿಯಾನಕ್ಕೆ ಶುಕ್ರವಾರ (ಆ.12) ಚಾಲನೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಮ್ಮ ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಆದ ಹಿನ್ನೆಲೆಯಲ್ಲಿ, ಕೇಂದ್ರ ಸರಕಾದರ ಆದೇಶದಂತೆ 'ಆಜಾದೀ ಕ ಅಮೃತ ಮಹೋತ್ಸವ' ದ ಅಂಗವಾಗಿ ಮನೆ ಮನೆಗಳಲ್ಲಿ ರಾಷ್ಟ್ರ ಧ್ವಜ ಎಂಬ ಅಭಿಯಾನವನ್ನು ಆಚರಿಸಲಾಗುತ್ತಿದೆ. ರಾಷ್ಟ್ರ ಧ್ವಜವನ್ನು ಮನೆ ಮನೆಗಳಲ್ಲಿ ಆಗಸ್ಟ್ 13 ರಿಂದ 15 ರಂದು ಹಾರಿಸಬೇಕು, ಅರಳಿಸಬೇಕು, ಗೌರವಿಸಬೇಕು, ರಾಷ್ಟ್ರದ ಬಗ್ಗೆ ಅಭಿಮಾನ ಮತ್ತು ಗೌರವ ಮೂಡಿಸಬೇಕು ಎಂದು ನುಡಿದರು. ಪ್ರತಿ ಗೃಹರಕ್ಷಕರು ತಮ್ಮ ಮನೆಗಳಲ್ಲಿ ಮೂರು ದಿನ ರಾಷ್ಟ್ರ ಧ್ವಜ ಅರಳಿಸಿ, ದೇಶ ಪ್ರೇಮ ಮೆರೆಯಬೇಕು ಎಂದು ಗೃಹರಕ್ಷಕರಿಗೆ ಆದೇಶ ನೀಡಿದರು.
ಈ ಕಾರ್ಯಕ್ರಮದಲ್ಲಿ ಪಣಂಬೂರು ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಶಿವಪ್ಪ ನಾಯ್ಕ ಹಾಗೂ ಗೃಹರಕ್ಷಕ ಗೃಹರಕ್ಷಕಿಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق