ಬೆಂಗಳೂರು: ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ 44,98,573 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ವಿತರಣೆಗೆ 132 ಕೋಟಿ ರೂ. ಬಿಡುಗಡೆಗೆ ಆದೇಶಿಸಲಾಗಿದೆ.
ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಅಳತೆಗೆ ತಕ್ಕಂತೆ ಮೊತ್ತವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ
ಒಂದರಿಂದ ಐದನೇ ತರಗತಿಯ ಮಕ್ಕಳಿಗೆ ತಲಾ 265 ರೂ, ಆರರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ತಲಾ 295 ರೂ ಮತ್ತು 9, 10 ನೇ ತರಗತಿಯ ವಿದ್ಯಾರ್ಥಿಗಳಿಗೆ ತಲಾ 325 ರೂ. ಬಳಸಲು ನಿಗದಿಪಡಿಸಲಾಗಿದೆ.
ತಾಲೂಕುವಾರು ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಖಜಾನೆ 2 ಮೂಲಕ ನೇರವಾಗಿ 204 ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ.
ಎಸ್.ಡಿ.ಎಂ.ಸಿ. ಗಳ ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸಿ ಅನುದಾನ ಹಂಚಿಕೆ ಮಾಡಲು ಶಿಕ್ಷಣ ಇಲಾಖೆ ಆಯುಕ್ತರು ನಿರ್ದೇಶನ ನೀಡಿದ್ದಾರೆ. ಈ ಅನುದಾನವನ್ನು ಅನ್ಯ ಕಾರಣಕ್ಕೆ ಬಳಸದಂತೆ ಸೂಚನೆ ನೀಡಲಾಗಿದೆ.
إرسال تعليق