ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಧಾನಿ ಮೋದಿ ಮಂಗಳೂರು ಭೇಟಿ: ಶಾಸಕ ಕಾಮತ್ ನೇತೃತ್ವದಲ್ಲಿ ಮಂಡಲ ಪ್ರಮುಖರ ಸಭೆ

ಪ್ರಧಾನಿ ಮೋದಿ ಮಂಗಳೂರು ಭೇಟಿ: ಶಾಸಕ ಕಾಮತ್ ನೇತೃತ್ವದಲ್ಲಿ ಮಂಡಲ ಪ್ರಮುಖರ ಸಭೆ


ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಜೀ ಅವರು ಸೆಪ್ಟೆಂಬರ್ 2ನೇ ತಾರೀಕು ಮಂಗಳೂರಿಗೆ ಆಗಮಿಸುತ್ತಿರುವ‌ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಮಂಡಲ ಪ್ರಮುಖರ ಸಭೆ ನಡೆಯಿತು. 


ಈ ವಿಚಾರದ ಕುರಿತು ಮಾತನಾಡಿದ ಶಾಸಕ ಕಾಮತ್, ಪ್ರಧಾನಿ ಆಗಮನದ‌ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಜನರನ್ನು ಸೇರಿಸುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮನೆ ಮನೆ ಭೇಟಿ ಮಾಡುತಿದ್ದಾರೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಭಾಗವಹಿಸುವ ದೃಷ್ಟಿಯಿಂದ ಈಗಾಗಲೇ ಸಿದ್ಧತೆ ಪ್ರಾರಂಭವಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.


ಸಭೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಮೋನಪ್ಪ ಭಂಡಾರಿ, ಮಂಡಲ‌ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಮಂಡಲ‌ ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರ, ಸುರೇಂದ್ರ ಜಪ್ಪಿನಮೊಗರು ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸುತ್ತಿರುವ‌ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರ ಉಪಸ್ಥಿತಿಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಡಾ. ವೈ ಭರತ್ ಶೆಟ್ಟಿ ಅವರು ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದರು. 


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್ ಹಾಗೂ ಇತರೆ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post