ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

.



ಧರ್ಮತ್ತಡ್ಕ: 2022-23 ಶೈಕ್ಷಣಿಕ ವರ್ಷದ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಶಾಲಾ ಸಭಾಂಗಣದಲ್ಲಿ ಜರಗಿತು. ಇದೇ ಸಂದರ್ಭ 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಹಾಗೂ ಪ್ಲಸ್ ಟು ಪರೀಕ್ಷೆಯಲ್ಲಿ ಉನ್ನತ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು. 


ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ A+ ಪಡೆದ 16 ವಿದ್ಯಾರ್ಥಿಗಳನ್ನು ,ಒಂಭತ್ತು ವಿಷಯಗಳಲ್ಲಿ A+ ಪಡೆದ 4 ವಿದ್ಯಾರ್ಥಿಗಳನ್ನು ಮತ್ತು ಹೈಯರ್ ಸೆಕೆಂಡರಿ ವಿಭಾಗದಲ್ಲಿ ಎಲ್ಲಾ ವಿಷಯಗಳಲ್ಲೂ A+ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ಹಾಗೂ ಉನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು.


ಈ ಸುಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಅಶೋಕನ್ ಅವರ ಹೆತ್ತವರಾದ ಶ್ರೀಮತಿ ನಾರಾಯಣಿ ಅಮ್ಮ ಹಾಗೂ ಶ್ರೀ ಕಣ್ಣನ್ ದಂಪತಿಗಳ ಸ್ಮರಣಾರ್ಥ ನಗದು ಹಾಗೂ ಸ್ಮರಣಿಕೆಯನ್ನು ಎಲ್ಲಾ ವಿಷಯಗಳಲ್ಲಿ A+ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.


ಇದರೊಂದಿಗೆ "ಮೇಪೋಡು ಶ್ರೀ ಸುಬ್ರಾಯ ಮಯ್ಯ' ದತ್ತಿನಿಧಿಯನ್ನು, ಕನ್ನಡ ಮಾಧ್ಯಮದಲ್ಲಿ ಉನ್ನತ ಸಾಧನೆಗೈದ ಆಯ್ದ ಎರಡು ವಿದ್ಯಾರ್ಥಿಗಳಿಗೆ ಶ್ರೀಮತಿ ಈಶ್ವರಿ ಟೀಚರ್ ವಿತರಿಸಿದರು.  


ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಇಬ್ರಾಹಿಂ ಎನ್ ವಹಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್,  ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾದ ಎನ್ ರಾಮಚಂದ್ರ ಭಟ್, ಯು ಪಿ ಶಾಲೆಯ ವ್ಯವಸ್ಥಾಪಿಕೆ ಶ್ರೀಮತಿ ವಿಜಯ ಶ್ರೀ, ಹೈಯರ್ ಸೆಕೆಂಡರಿ ಶಿಕ್ಷಕರಾದ ಸತೀಶ್ ಶೆಟ್ಟಿ ಒಡ್ಡಂಬೆಟ್ಟು, ಶುಭಾಶಂಸನೆಗೈದರು.ಕನ್ನಡ ಅಧ್ಯಾಪಿಕೆ ಶ್ರೀಮತಿ ಶ್ವೇತಾ ಕುಮಾರಿ ಎಂ. ವರಿದಿ ವಾಚಿಸಿದರು.


ಕಾರ್ಯಕ್ರಮದಲ್ಲಿ ನಿವೃತ್ತ ಗಣಿತ ಶಿಕ್ಷಕ ಅಶೋಕ್ ಕುಮಾರ್ ಟಿ ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. 


ರಕ್ಷಕ ಶಿಕ್ಷಕ ಸಂಘದ ಸಮಿತಿಯನ್ನು ಈ ಸಂದರ್ಭದಲ್ಲಿ ರೂಪಿಸಲಾಯಿತು.ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಶಾಲಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಲ್ಲಿ ಹೆತ್ತವರ ಸಲಹೆ ಸೂಚನೆಗಳನ್ನು ಸ್ವೀಕರಿಸಲಾಯಿತು. 


ಕಾರ್ಯಕ್ರಮಕ್ಕೆ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು, ಶ್ರೀ ರಾಮಕೃಷ್ಣ ಭಟ್ ಸ್ವಾಗತಿಸಿ, ಶ್ರೀಮತಿ ಸೌಮ್ಯ ಎಂ ವಂದಿಸಿದರು, ಶಿವಪ್ರಸಾದ್ ಸಿ, ಪ್ರಶಾಂತ ಹೊಳ್ಳ ಎನ್ ಹಾಗೂ ಶಶಿಧರ ಕೆ ನಿರೂಪಣೆಯಲ್ಲಿ ಸಹಕರಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم