ದಾವಣಗೆರೆ: ಬೆಂಗಳೂರು ಕಡೆಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಒಂಭತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆಯೊಂದು ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ತಡರಾತ್ರಿ 1:30ಕ್ಕೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತಕ್ಕೀಡಾದ ಖಾಸಗಿ ಬಸ್ ನಲ್ಲಿ ಸುಮಾರು 30 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ಈ ಪ್ರಯಾಣಿಕರ ಜೊತೆಗೆ 9 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಾಕಿ ಉಳಿದ ಕೆಲವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಯಾವುದೇ ಪ್ರಾಣಾ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಗಳೂರು ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
إرسال تعليق