ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುತ್ತೂರು ಉಪವಿಭಾಗ DYSP ಡಾ.ಗಾನಾ ಪಿ ಕುಮಾರ್ ವರ್ಗಾವಣೆ

ಪುತ್ತೂರು ಉಪವಿಭಾಗ DYSP ಡಾ.ಗಾನಾ ಪಿ ಕುಮಾರ್ ವರ್ಗಾವಣೆ

 



ಪುತ್ತೂರು:  ಕಳೆದೆರಡು ವರ್ಷಗಳಿಂದ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.


ಪ್ರಸ್ತುತ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೀರಯ್ಯ ಹಿರೇಮಠ್ ಅವರನ್ನು ಪುತ್ತೂರು ಉಪವಿಭಾಗದ ಡಿವೈಎಸ್ಪಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ.


ಪ್ರಾಯೋಗಿಕ ತರಬೇತಿ ಪೂರ್ಣಗೊಳಿಸಿ ತಿಂಗಳ ಹಿಂದೆಯಷ್ಟೇ ಸಿಐಡಿಗೆ ತಾತ್ಕಾಲಿಕವಾಗಿ ನಿಯುಕ್ತಿಗೊಂಡಿದ್ದ ವೀರಯ್ಯ ಹಿರೇಮಠ ಅವರನ್ನು ಇದೀಗ ಪುತ್ತೂರು ಉಪವಿಭಾಗದ ಡಿವೈಎಸ್ಪಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ ಎಂದು ತಿಳಿದು ಬಂದಿದೆ.

0 تعليقات

إرسال تعليق

Post a Comment (0)

أحدث أقدم