ಉಡುಪಿ: ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟ್ಮೆಂಟ್ ನ ನಿವೃತ್ತ ಉದ್ಯೋಗಿ, ಕಟ್ಟಡಗಳ ವಿನ್ಯಾಸಕಾರ, ಪಾಜಕಕ್ಷೇತ್ರ ನಿವಾಸಿ ಮಧ್ವರಾಜ್ ಭಟ್ ರವರು (70) ಮಂಗಳವಾರ ಬೆಳಗ್ಗಿನ ಜಾವ ನಿಧನರಾದರು.
ಪೆರ್ಡೂರು ಪಕ್ಕಾಲು ಬಳಿ ಆ. 13ರಂದು ಸಂಭವಿಸಿದ ಬೈಕ್ ಮತ್ತು ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಕೆ ಎಂ ಸಿ ಆಸ್ಪತ್ರೆಯಲ್ಲಿ ನಿಧನರಾದರು.
ಶ್ರಿ ಕೃಷ್ಣ ಮಠದ ಸುತ್ತು ಪೌಳಿಯ ನಿರ್ಮಾಣ ಕಾರ್ಯದಲ್ಲಿ, ರಾಜಾಂಗಣ,ಗೀತಾ ಮಂದಿರ ನಿರ್ಮಾಣ ಸಂಧರ್ಭ ವಿಶೇಷ ಮುತುವರ್ಜಿ ವಹಿಸಿದ್ದ ಇವರನ್ನು ಪೇಜಾವರ ಹಿರಿಯ ಶ್ರೀಗಳು ಶ್ರೀ ಕೃಷಾನುಗ್ರಹ ಪ್ರಶಸ್ತಿ ನೀಡಿ ಪುರಸ್ಕರಿಸಿದ್ದರು. ನೇಪಾಳ, ಗುಜರಾತ್ ನ ದ್ವಾರಕಾ, ದ.ಕ, ಉಡುಪಿ, ಬೆಂಗಳೂರು, ಕೋಲಾರ, ಕುಂಭಾಶಿ ಅಯ್ಯಪ್ಪ ಸ್ವಾಮಿ ದೇವಾಲಯ, ಸಹಿತ ಹಲವೆಡೆ ದೇವಸ್ಥಾನ ಮತ್ತು ಮಠಗಳ ಮರು ನಿರ್ಮಾಣದ ಕಾಮಗಾರಿಗೆ ನಕ್ಷೆಗಳನ್ನು ತಯಾರಿಸಿ ಕಟ್ಟಡಗಳ ನಿರ್ಮಾಣಕ್ಕೆ ರೂಪು ರೇಷೆಗಳನ್ನು ತಯಾರಿಸಿ ಕೊಡುತ್ತಿದ್ದರು.
ಸಾತ್ವಿಕ ಸ್ವಭಾವದವರಾಗಿದ್ದು, ಜನಾನುರಾಗಿಯಾಗಿದ್ದ ಶ್ರೀಯುತರು ಪತ್ನಿ,ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಹಲವಾರು ಬಂಧು ಮಿತ್ರರನ್ನು ಅಗಲಿದ್ದಾರೆ. ಶ್ರೀಯುತರ ನಿಧನಕ್ಕೆ ಅಷ್ಟ ಮಠಗಳ ಶ್ರೀಗಳು, ಉಡುಪಿ ಶಾಸಕ ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಹಿತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق