ಬಂಟ್ವಾಳ: 2021-2022 ನೇ ಸಾಲಿನಲ್ಲಿ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆ ಮತ್ತು ಇನ್ನಿತರ ಚಟುವಟಿಕೆಗಳನ್ನು ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿಯು ಪ್ರೋತ್ಸಾಹಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಇತ್ತೀಚಿಗೆ ನಡೆದ ಬ್ಯಾಂಕ್ ನ ಮಹಾ ಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಮತ್ತು ಬ್ಯಾಂಕ್ ನಿರ್ದೇಶಕ ಟಿ. ಜಿ. ರಾಜರಾಮ್ ಭಟ್ ರವರು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಯವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ. ಬಿ, ಸಹಕಾರ ಸಂಘಗಳ ಉಪ ನಿಬಂಧಕ ಪ್ರವೀಣ್. ಬಿ. ನಾಯಕ್ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರು ಉಪಸ್ಥಿತರಿದ್ದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಭಿನಂದನೆ:
ಸಿದ್ದಕಟ್ಟೆ ಸಹಕಾರಿ ಸಂಘವು ಇತ್ತೀಚಿನ ವರ್ಷಗಳಲ್ಲಿ ತನ್ನ ವ್ಯಾಪ್ತಿಯ ರೈತಪಿ ವರ್ಗದ ಸಂಘದ ಸದಸ್ಯರಿಗೆ ಕೃಷಿ ಸಾಲ ಸೇರಿದಂತೆ ಇನ್ನಿತರ ಸಾಲ ಸೌಲಭ್ಯ ನೀಡಿ ಗಣನೀಯ ಸೇವೆ ಸಲ್ಲಿಸಿ ಅಪೂರ್ವ ಸಾಧನೆಗೆ ಪಾತ್ರರಾದ ಸಂಘದ ಆಡಳಿತ ಮಂಡಳಿ ಎಲ್ಲಾ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರಿಗೂ ಶಾಸಕ ರಾಜೇಶ್ ನಾಯ್ಕ್ ಅಭಿನಂದನೆ ಸಲ್ಲಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
Post a Comment