ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಟೇಬಲ್‌ ಟೆನಿಸ್‌: ಸುಬೋಧ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಟೇಬಲ್‌ ಟೆನಿಸ್‌: ಸುಬೋಧ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ



ಪಾಣಾಜೆ: ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿಕೊಡುವ, ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಜರುಗಿದ ತಾಲ್ಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ನಮ್ಮ ಸುಬೋಧ ಪ್ರೌಢ ಶಾಲೆ, ಪಾಣಾಜೆಯ ಎಂಟನೇ ತರಗತಿಯ ವಿದ್ಯಾರ್ಥಿ, ಕೌಶಲ್ ಹದಿನಾಲ್ಕರ ವಯೋಮಾನದ ಬಾಲಕರ ವಿಭಾಗದಲ್ಲಿ ತಾಲ್ಲೂಕು ಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾನೆ.


ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು, ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ನಡೆಸಿಕೊಟ್ಟ ಹದಿನಾಲ್ಕರ ವಯೋಮಾನದ ಬಾಲಕಿಯರ ಟೇಬಲ್ ಟೆನಿಸ್ ವಿಭಾಗದಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ನಫೀಸತ್ ಮಶ್ರೂಫಾ ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.


ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ನಡೆಸಿಕೊಡುವ, ಸಂತ ಫಿಲೋಮಿನಾ ಪ್ರೌಢಶಾಲೆ, ಪುತ್ತೂರಿನಲ್ಲಿ ಜರುಗಿದ, ಹದಿನೇಳರ ವಯೋಮಾನದ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ, ಸುಬೋಧ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯರಾದ ಫಾತಿಮಾ ಅಫ್ನಾ, ತನ್ವಿ ಎ.ಕೆ ಮತ್ತು ತೃಪ್ತಿ ಅವರ ತಂಡ  ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.


ಈ ಎಲ್ಲ ವಿದ್ಯಾರ್ಥಿಗಳಿಗೆ ಸುಬೋಧ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್ ಪಿ ಯವರು ತರಬೇತಿ ನೀಡಿದ್ದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

0 تعليقات

إرسال تعليق

Post a Comment (0)

أحدث أقدم