ಮೈಸೂರು: ನವವಧು ಆಷಾಢ ಮಾಸಕ್ಕಾಗಿ ತವರು ಮನೆಗೆ ಬಂದಿದ್ದಳು. ಈ ವೇಳೆ ಪಕ್ಕದ ಮನೆಯಲ್ಲಿದ್ದ ಪ್ರಿಯಕರನ ಜೊತೆ ಪರಾರಿಯಾಗಿದ್ದಳು. ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡ ಪೊಲೀಸರು ಒಂದು ವಾರದಲ್ಲಿ ಪತ್ತೆ ಮಾಡಿ ಪ್ರಿಯಕರನಿಂದ ಬೇರ್ಪಡಿಸಿದ್ದರು.
ಪ್ರಿಯಕರನಿಂದ ದೂರವಾದರಿಂದ ಮನನೊಂದ ನವವಧು ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕು ರಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ.
20 ವರ್ಷದ ವರ್ಷಿತಾ(20) ಮೃತಪಟ್ಟಿರುವ ನವವಧು. ವರ್ಷಿತಾ ತನ್ನ ಮನೆಯ ಪಕ್ಕದಲ್ಲಿದ್ದ ಕಿರಣ್ ಎಂಬಾತನನ್ನ ಪ್ರೀತಿಸುತ್ತಿದ್ದಳು. ಮಗಳ ಮನ ಒಲಿಸಿ ಚಾಮರಾಜನಗರದ ಯುವಕನೊಂದಿಗೆ ಮೇ 8 ರಂದು ಅದ್ಧೂರಿಯಾಗಿ ವಿವಾಹ ಮಾಡಿಕೊಡಲಾಗಿತ್ತು.
ಆಷಾಢ ಮಾಸ ಹಿನ್ನೆಲೆ ವರ್ಷಿತಾ ತವರು ಮನೆ ಕಾರ್ಯಕ್ರಮಕ್ಕೆ ಆಗಮಿಸಿದ್ದಳು. ಈ ವೇಳೆ ಪಕ್ಕದ ಮನೆಯಲ್ಲಿದ್ದ ಪ್ರಿಯತಮ ಕಿರಣ್ ಜೊತೆ ಮನೆ ಬಿಟ್ಟು ವರ್ಷಿತಾ ಪರಾರಿಯಾಗಿದ್ದಳು.
ಈ ಬಗ್ಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರೇಮಿಗಳು ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದು, ವಾಪಸ್ ಕರೆತಂದ ಪೊಲೀಸರು ಇಬ್ಬರಿಗೂ ಬುದ್ಧಿವಾದ ಹೇಳಿ ಅವರ ಮನೆಗೆ ಕಳುಹಿಸಿದ್ದರು.
ಬಳಿಕ ವರ್ಷಿತಾ ಮೈಸೂರಿನಲ್ಲಿದ್ದ ಸಂಬಂಧಿಕರ ಮನೆಗೆ ಬಂದು 3 ದಿನ ಸಮಯ ಕಳೆದು, ನಂತರ ರಾಂಪುರ ಗ್ರಾಮದಲ್ಲಿರುವ ತನ್ನ ತಾತನ ಮನೆಗೆ ಬಂದಿದ್ದಳು ಎನ್ನಲಾಗಿದೆ.
ಪ್ರಿಯಕರ ದೂರವಾಗಿದ್ದರಿಂದ ಮನನೊಂದಿದ್ದ ವರ್ಷಿತಾ ತಾತನ ಮನೆಯ ವಾಶ್ ರೂಂ ನಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment