ಗುವಾಹಟಿ: ಅಸ್ಸಾಂನ ನಗಾಂವ್ ಜಿಲ್ಲೆಯ ಲೆವೆಲ್ ಕ್ರಾಸಿಂಗ್ ನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆಯೊಂದು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುವಾಹಟಿಯಿಂದ ಸಿಲ್ಘಾಟ್ಗೆ ತೆರಳುತ್ತಿದ್ದ ರೈಲು ಮಾರುತಿ ಸ್ವಿಫ್ಟ್ ಕಾರಿಗೆ ರೈಲು ಡಿಕ್ಕಿ ಹೊಡೆದಿದೆ, ಅದರಲ್ಲಿ ಕಾರು ಮಾಲೀಕ ಚಂದ್ರ ಕುಮಾರ್ ಕಲಿತಾ, ಅವರ ಪತ್ನಿ ನೀಲಿಮಾ ಕಲಿತಾ ಮತ್ತು ಅವರ ಮಗ ಸುನುಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕಾರಿಗೆ ತೀವ್ರ ಹಾನಿಯಾಗಿದೆ.
إرسال تعليق