ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ತುಮಕೂರು ಭೀಕರ ರಸ್ತೆ ಅಪಘಾತ; ಮೃತರ ಕುಟುಂಬಕ್ಕೆ ಪ್ರಧಾನಿಯಿಂದ ಪರಿಹಾರ

ತುಮಕೂರು ಭೀಕರ ರಸ್ತೆ ಅಪಘಾತ; ಮೃತರ ಕುಟುಂಬಕ್ಕೆ ಪ್ರಧಾನಿಯಿಂದ ಪರಿಹಾರ

 


ಬೆಂಗಳೂರು: ತುಮಕೂರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.


ಟ್ವೀಟ್ ಮೂಲಕ ಪ್ರಧಾನಿ, ಕರ್ನಾಟಕದ ತುಮಕೂರಲ್ಲಿ ನಡೆದ ರಸ್ತೆ ಅಪಘಾತವು ಹೃದಯ ವಿದ್ರಾವಕವಾಗಿದೆ. ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸುತ್ತೇನೆ.


ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ ತಲಾ ಪಿಎಂಎನ್​ಆರ್​ಎಫ್​  ಅಡಿಯಲ್ಲಿ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಗೊಂಡವರಿಗೆ 50 ಲಕ್ಷ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.


ತುಮಕೂರಿನ ಶಿರಾ ರಸ್ತೆಯ ಬಾಲೇನಹಳ್ಳಿ ಗೇಟ್ ಬಳಿ ಲಾರಿ ಮತ್ತು ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, 14 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

0 Comments

Post a Comment

Post a Comment (0)

Previous Post Next Post