ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 9 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ, ಕೃತ್ಯ ಎಸಗಿದ ಇಬ್ಬರು ಕಾಮುಕರು ನಾಪತ್ತೆ

9 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ, ಕೃತ್ಯ ಎಸಗಿದ ಇಬ್ಬರು ಕಾಮುಕರು ನಾಪತ್ತೆ

 


ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲಾಗಿದೆ.

9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಪೈಶಾಚಿಕ ಕೃತ್ಯ ಎಸಗಿ ನಾಪತ್ತೆಯಾಗಿದ್ದಾರೆ. ಮೈಸೂರಿನ ವಿವಿ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಬಾಲಕಿ ಅನಾರೋಗ್ಯಕ್ಕೆ ಒಳಗಾದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಬಾಲಕಿ ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.

ಮೈಸೂರಿನ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 Comments

Post a Comment

Post a Comment (0)

Previous Post Next Post