ಹೈದರಾಬಾದ್: ತಿರುಪತಿ ವೆಂಕಟೇಶ್ವರ ಸ್ವಾಮಿಯ ಭಕ್ತರಾಗಿರುವ ಚೆನ್ನೈನ ಉದ್ಯಮಿ ಅಬ್ದುಲ್ ಘನಿ ಎಂಬವವರು ದೇವಸ್ಥಾನಕ್ಕೆ ಮಂಗಳವಾರ ₹1.02 ಕೋಟಿ ದೇಣಿಗೆ ನೀಡಿದ್ದಾರೆ.
ಪತ್ನಿ ಸುಬೀನಾ ಬಾನು ಮತ್ತು ಮಕ್ಕಳೊಂದಿಗೆ ಮಂಗಳವಾರ ದೇವರ ದರ್ಶನ ಪಡೆದ ಘನಿ ಅವರು ತಿರುಪತಿ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ ಪೀಠೋಪಕರಣ ಹಾಗೂ ಪಾತ್ರೆಗಳನ್ನು ಖರೀದಿಸಲು ₹87 ಲಕ್ಷ ಹಾಗೂ ಎಸ್.ವಿ.ಅನ್ನಪ್ರಸಾದಂ ಟ್ರಸ್ಟ್‌ಗೆ ₹15 ಲಕ್ಷ ಒದಗಿಸಿದರು.
ತಿರುಪತಿ ತಿರುಮಲ ದೇವಾಲಯ ಸಮಿತಿಯ ಅಧಿಕಾರಿಯೊಬ್ಬರಿಗೆ ಘನಿ ಕುಟುಂಬದವರು ಈ ಮೊತ್ತದ ಡಿ.ಡಿ ಹಸ್ತಾಂತರಿಸಿದರು.
'ವೆಂಕಟೇಶ್ವರ, ಅಲ್ಲಾ, ಏಸು ಎಲ್ಲರೂ ಒಂದೇ ಎಂದು ನಂಬಿದ್ದೇನೆ. ನಾನು ವೆಂಕಟೇಶ್ವರ ಸ್ವಾಮಿಯ ಭಕ್ತ. ಸುಮಾರು 25 ವರ್ಷಗಳಿಂದ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದೇನೆ' ಎಂದು ಹೇಳಿದರು
إرسال تعليق