ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವೃದ್ಧೆಯ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದು ಗೂಸ ತಿಂದ ಮಹಿಳೆ

ವೃದ್ಧೆಯ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದು ಗೂಸ ತಿಂದ ಮಹಿಳೆ

 



ಚಿಕ್ಕಬಳ್ಳಾಪುರ:  ಮಹಿಳೆಯೊಬ್ಬಳು ಸರ ಕಳ್ಳತನಕ್ಕೆ ಯತ್ನಿಸಿ, ಗ್ರಾಮಸ್ಥರಿಂದಲೇ ಗೂಸಾ ತಿಂದಿರುವ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.


ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ಗ್ರಾಮದಲ್ಲಿ ವೃದ್ಧೆಯ ಬಳಿ ಮಾಂಗಲ್ಯ ಸರ ಕಸಿದು ಪರಾರಿಯಾಗಲು ಯತ್ನಿಸಿ ಸಿಕ್ಕಿಬಿದ್ದ ಕಳ್ಳಿಗೆ ಗ್ರಾಮಸ್ಥರೇ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸರಗಳ್ಳಿಯನ್ನು ನಂದಿನಿ ಎಂದು ಗುರುತಿಸಲಾಗಿದೆ.


ಮಧುರೈ-ಹೆಸರುಘಟ್ಟ ರಸ್ತೆಯಲ್ಲಿ ಬೆಳಿಗ್ಗೆಯಿಂದಲೂ ಬೈಕ್ ಸವಾರನೊಂದಿಗೆ ಮಹಿಳೆ ಸುತ್ತಾಡುತ್ತಿದ್ದಳು. ನಂತರ ಕನಸವಾಡಿ ಗ್ರಾಮದಲ್ಲಿ ವೃದ್ಧೆಯ ಮಾಂಗಲ್ಯ ಸರಕ್ಕೆ ಕೈ ಹಾಕಿ ಕಿತ್ತುಕೊಳ್ಳಲು ಯತ್ನಿಸಿ, ಬೈಕ್‌ನಿಂದ ಕೆಳಕ್ಕೆ ಬಿದ್ದಿದ್ದಾಳೆ. 


ಈ ವೇಳೆ ಬೈಕ್ ಸವಾರ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಸಿಕ್ಕಿಬಿದ್ದ ಮಹಿಳೆ ಸರಗಳ್ಳಿಗೆ ಗ್ರಾಮಸ್ಥರು ಥಳಿಸಿ, ದೊಡ್ಡಬೆಳವಂಗಲ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.


0 تعليقات

إرسال تعليق

Post a Comment (0)

أحدث أقدم