ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂಬೂರು ಬಳಿ ನಡೆದ ವಾಹನ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆಯೊಂದು ನಡೆದಿದೆ.
ಇಂದು (ಸೋಮವಾರ) ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಚೆಂಬು ಗ್ರಾಮದ ಪ್ರತೀಕ್ (19) ಐಟಿಐ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅರಂಬೂರು ಬಳಿ ಬೈಕ್ ಮತ್ತು ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿದ್ದು, ತೇಜಸ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿದು ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
إرسال تعليق