ಬೆಂಗಳೂರು: ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ನೀಡುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ವಿವಿಧ (ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಹಾಗೂ ಇತರೆ) ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಅಥವಾ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಛೇರಿ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು 31:10:2022 ಕೊನೆಯ ದಿನಾಂಕವಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
1) ಅಂಕಪಟ್ಟಿ
2) ಜಾತಿ ಹಾಗೂ ಆದಾಯ ಪ್ರಮಾಣ ಪತ್ರ
3) ಆಧಾರ್ ಕಾರ್ಡ್ ಜೆರಾಕ್ಸ್
4) ಬ್ಯಾಂಕ್ ಖಾತೆ ಪುಸ್ತಕ
5) ವಿದ್ಯಾರ್ಥಿಯ ಫೋಟೋ
Post a Comment