ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

 


ಕಲಬುರಗಿ : ಕಲಬುರಗಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪಾ ಮುಳೇಗಾಂವ ಅವರು ತಿಳಿಸಿದ್ದಾರೆ.


ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರು ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗುವವರೆಗೆ ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲು ಅನುಮತಿ ನೀಡಲಾಗಿದೆ.


ಅತಿಥಿ ಉಪನ್ಯಾಸಕರ ನೇಮಕಾತಿಯು ಸರ್ಕಾರದ ಆದೇಶದ ಷರತ್ತುಗಳಿಗೊಳಪಟ್ಟಿರುತ್ತದೆ. ಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ಆಯಾ ಕಾಲೇಜಿನ ಪ್ರಿನ್ಸಿಪಾಲರಿಗೆ 2022ರ ಸೆಪ್ಟೆಂಬರ್ 9 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರು ಆಯ್ಕೆ ಮಾಡಿದ ಉಪನ್ಯಾಸಕರ ವಿಷಯವಾರು ಪಟ್ಟಿಯನ್ನು ಸಲ್ಲಿಕೆಗೆ 2022ರ ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ.


ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಖಾಲಿಯಿರುವ ಉಪನ್ಯಾಸಕರ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನ ಸೌಧದ ಆವರಣದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.



0 تعليقات

إرسال تعليق

Post a Comment (0)

أحدث أقدم