ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಲಂಗಾ ದಾವಣಿ ಯಲ್ಲಿ ಬಾಲಿವುಡ್ ನಟಿ ಜಾನ್ವಿ ಕಪೂರ್

ಲಂಗಾ ದಾವಣಿ ಯಲ್ಲಿ ಬಾಲಿವುಡ್ ನಟಿ ಜಾನ್ವಿ ಕಪೂರ್

 


ತಿರುಪತಿ : ಸದಾ ಹಾಟ್ ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಇದೀಗ ಲಂಗಾ ದಾವಣಿಯಲ್ಲಿ ಕಾಣಿಸಿಕೊಂಡು ಅಭಿಮಾನಿಗಳನ್ನು ಅಚ್ಚರಿಗೊಳಿಸಿದ್ದಾರೆ.

ಸಿನೆಮಾಗಳ ಶೂಟಿಂಗ್ ಗೆ ಬ್ರೇಕ್ ಹಾಕಿ ತಿರುಪತಿ ತಿರುಮಲಕ್ಕೆ ಭೇಟಿ ನೀಡಿದ ಜಾನ್ವಿ ಕಪೂರ್ ಪಕ್ಕಾ ತೆಲುಗು ಹುಡುಗಿಯಂತೆ ತಿರುಪತಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದಕ್ಷಿಣ ಭಾರತದ ಮೊದಲ ಲೇಡಿ ಸೂಪರ್ ಸ್ಟಾರ್ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್, ಚಿತ್ರೀಕರಣ ಬ್ರೇಕ್ ನೀಡಿ,ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದಿದ್ದಾರೆ.

ಸದಾ ಮಾಡರ್ನ್ ಲುಕ್‌ನಲ್ಲಿ ಕಂಗೊಳಿಸುತ್ತಿದ್ದ ನಟಿ ಜಾನ್ವಿ, ಇದೀಗ ತಿರುಪತಿಯಲ್ಲಿ ತೆಲುಗಿನ ಹುಡುಗಿಯಂತೆ ಕಾಣಿಸಿಕೊಂಡಿದ್ದಾರೆ. ಟ್ರೆಡಿಷನಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಜಾನ್ವಿ ಕಪೂರ್ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಜೊತೆಗೆ ಇದೀಗ ದಕ್ಷಿಣ ಸಿನಿಮಾಗಳಲ್ಲೂ ಮಿಂಚಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ.

0 Comments

Post a Comment

Post a Comment (0)

Previous Post Next Post