ಬೆಂಗಳೂರು : ಆಂಧ್ರಪ್ರದೇಶದ ಚಿತ್ತೂರು ಬಳಿಯಲ್ಲಿ ಗಾಂಜಾ ಗ್ಯಾಂಗ್ ಹಿಡಿಯುವ ವೇಳೆ ಪೊಲೀಸರ ಕಾರು ಅಪಘಾತವಾಯಿತು. ಈ ಘಟನೆಯಲ್ಲಿ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಸೇರಿ ಮೂವರು ಸಾವನ್ನಪ್ಪಿದ್ದರು.
ಈ ಬಳಿಕ ಎಚ್ಚೆತ್ತುಕೊಂಡಿರುವಂತ ಸರ್ಕಾರ, ಪೊಲೀಸರ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ.
ಈ ಬಗ್ಗೆ ರಾಜ್ಯ ಪೊಲೀಸ್ ಇಲಾಖೆಯ ಸಿಐಡಿ, ಡಿಜಿಪಿ ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆ ಬಂದೋಬಸ್ತ್, ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖೆ ಸೇರಿದಂತೆ ಇನ್ನಿತರ ಅನ್ಯ ಕಾರ್ಯದ ಮೇಲೆ ನಿಯೋಜನೆಗೊಳ್ಳುವಂತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಯಾವುದೇ ವಾಹನದಲ್ಲಿ ಕರ್ತವ್ಯದ ನಿಮಿತ್ತ ಅಥವಾ ಕರ್ತವ್ಯದಿಂದ ಬಿಡುಗಡೆಯಾದ ನಂತರ, ಸುರಕ್ಷತೆಯ ದೃಷ್ಠಿಯಿಂದ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರಯಾಣ ಮಾಡದಂತೆ ತಿಳಿಸಲಾಗಿದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಮಾಹಿತಿ ಪ್ರಕಾರ ದೇಶದಲ್ಲಿ 2021ರಲ್ಲಿ ವಿವಿಧ ದರ್ಜೆಯ 427 ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ರಾತ್ರಿ ಪ್ರಯಾಣದ ವೇಳೆಯಲ್ಲಿ ಅಪಘಾತಗಳಿಂದಾಗಿ ಮೃತಪಟ್ಟಿದ್ದಾರೆ.
ಕರ್ನಾಟಕದಲ್ಲಿ ನಾಲ್ವರು ಮೃತಪಟ್ಟಿದ್ದರೇ, 25 ಮಂದಿ ರಾತ್ರಿ ಕರ್ತವ್ಯದ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿಸಲಾಗಿದೆ.
ಈ ಹಿನ್ನಲೆ ಪೊಲೀಸರ ಹಿತದೃಷ್ಠಿಯಿಂದ ರಾತ್ರಿ ಪ್ರಯಾಣ ನಿರ್ಬಂಧಿಸಿ, ಪೊಲೀಸ್ ಇಲಾಖೆಯಿಂದ ಆದೇಶಿಸಲಾಗಿದೆ.
Post a Comment