ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದಸರಾ ರಜೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 10 ರವರೆಗೆ ರಜೆ ಘೋಷಣೆ

ದಸರಾ ರಜೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 10 ರವರೆಗೆ ರಜೆ ಘೋಷಣೆ

 


ಬೆಂಗಳೂರು: ಮೈಸೂರಿನಲ್ಲಿ ನಡೆಯುವ ಹಾಗೆ ಮಂಗಳೂರಿನಲ್ಲಿಯೂ ಅದ್ದೂರಿಯಾಗಿ ದಸರಾ ಆಚರಿಸಲಾಗುತ್ತದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ಅಕ್ಟೋಬರ್‌ 3 ರಿಂದ ಶಾಲೆಗಳಿಗೆ ದಸರಾ ರಜೆ ನೀಡುವುದಾಗಿ ಘೋಷಣೆ ಮಾಡಲಾಗಿತ್ತು.




 ಇದರಿಂದಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ವಿರೋಧವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲೀಗ ಶಿಕ್ಷಣ ಸಚಿವರು ಆದೇಶದಲ್ಲಿ ಬದಲಾವಣೆಯನ್ನು ಮಾಡಿದ್ದಾರೆ.


ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಶಾಲಾ ದಸರಾ ರಜೆಯನ್ನು ಬದಲಾವಣೆ ಮಾಡುವಂತೆ ಸೂಚಿಸಿದ್ದಾರೆ.


 ಮಂಗಳೂರಿನಲ್ಲಿ ದಸರಾ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಸಪ್ಟೆಂಬರ್‌ 26 ರಿಂದ ಅಕ್ಟೋಬರ್‌ 10ರ ವರೆಗೆ ನೀಡುವಂತೆ ಸೂಚಿಸಲಾಗಿದ್ದು, ಅಕ್ಟೋಬರ್‌ 2ರಂದು ಗಾಂಧಿ ಜಯಂತಿಯನ್ನು ಆಚರಿಸುವ ಷರತ್ತಿನ ಮೇಲೆ ರಜೆ ಮಂಜೂರು ಮಾಡುವಂತೆ ತಿಳಿಸಿದ್ದಾರೆ.


ರಾಜ್ಯದಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಶಾಲೆಗಳಲ್ಲಿನ ಶೈಕ್ಷಣಿಕ ಚಟುವಟಿಕೆಗಳನ್ನು ನಿಗದಿ ಪಡಿಸಿ ಈ ಹಿಂದೆಯೇ ಮಾರ್ಗಸೂಚಿಯನ್ನು ಹೊರಡಿಸಲಾಗಿತ್ತು. ಶಾಲಾರಂಭ, ಶಾಲಾ ಮುಕ್ತಾಯದ ದಿನ, ದಸರಾ ರಜೆ, ಬೇಸಿಗೆ ರಜೆ ಹಾಗೂ ಪರೀಕ್ಷೆ ಯಾವಾಗ ನಡೆಸಬೇಕೆಂಬ ನಿರ್ದೇಶನವನ್ನು ನೀಡಲಾಗಿದೆ. ಆದರೆ ಇದೀಗ ಮಾರ್ಗಸೂಚಿಯಲ್ಲಿ ಬದಲಾವಣೆಯನ್ನು ಮಾಡಲಾಗಿದೆ.


0 تعليقات

إرسال تعليق

Post a Comment (0)

أحدث أقدم