ಬೆಂಗಳೂರು: ಉಪ ಸ್ಪೀಕರ್ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆ ಸವದತ್ತಿ ಎಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕರಾದ ಆನಂದ ಮಾಮನಿ ಕೆಲವು ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು.
ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳ ಹಿಂದೆ ಅವರನ್ನು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಅಥವಾ ನಾಳೆ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
إرسال تعليق