ಹೈದರಾಬಾದ್ : ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಮಹಿಳೆ ಸೇರಿದಂತೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಹೈದಾರಾಬಾದ್ ನ ಸಿಕಂದರಾಬಾದ್ ನಲ್ಲಿ ನಡೆದಿದೆ.
ಸಿಕಂದರಾಬಾದ್ ನ ರೂಬಿ ಹೋಟೆಲ್ ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿನ ರೂಬಿ ಎಲೆಕ್ಟ್ರಿಕ್ ವೆಹಿಕಲ್ ಶೋರಂ ನಲ್ಲಿ ಬ್ಯಾಟರಿ ಸ್ಪೋಟಗೊಂಡು, ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಈ ವೇಳೆ ಹೋಟೆಲ್ ನಲ್ಲಿದ್ದ ಮಹಿಳೆ ಸೇರಿದಂತೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೋಟೆಲ್ ನಲ್ಲಿ 25 ಪ್ರವಾಸಿಗರು ತಂಗಿದ್ದರು ಎನ್ನಲಾಗಿದ್ದು, ಈ ಜೊತೆಗೆ 6 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಲವರನ್ನು ಹೋಟೆಲ್ ನಿಂದ ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. 2 ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
Post a Comment