ಬಳ್ಳಾರಿ : ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಒಕ್ಕೂಟದಿಂದ ಸೆ.11ರಿಂದ ಹಾಲಿನ ಖರೀದಿ ದರವನ್ನು ಲೀಟರ್ ಗೆ ರೂ.1 ಹೆಚ್ಚಿಸಲಾಗಿದೆ ಎಂದು ರಾಬಕೊವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಬಕೊವಿ ಜಿಲ್ಲಾ ಹಾಲು ಒಕ್ಕೂಟದಲ್ಲಿ ಗುರುವಾರದಂದು ನಡೆದ ಆಡಳಿತ ಮಂಡಳಿ ಸಭೆಯ ತೀರ್ಮಾನದಂತೆ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ. ರೈತರು ಸದರಿ ದರ ಹೆಚ್ಚಳವನ್ನು ಸದುಪಯೋಗಪಡಿಸಿಕೊಂಡು, ಗುಣಮಟ್ಟದ ಹಾಲು ಉತ್ಪಾದನೆ ಹೆಚ್ಚಿಸಿ ಒಕ್ಕೂಟಕ್ಕೆ ಸರಬರಾಜು ಮಾಡಿ ಎಂದಿನಂತೆ ಒಕ್ಕೂಟದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
إرسال تعليق