ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ; ಮತ್ತೆ 3 ಆರೋಪಿಗಳ ಬಂಧನ

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ; ಮತ್ತೆ 3 ಆರೋಪಿಗಳ ಬಂಧನ

 


ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಬಗ್ಗೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಇದೀಗ ಮತ್ತೆ ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಒಟ್ಟು ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಜ್ಯೂನಿಯರ್ ಲೈನ್‌ಮ್ಯಾನ್ ಆಗಿರುವ ಹುಕ್ಕೇರಿ ತಾಲೂಕಿನ ಗಿರೀಶ ಬನಾಜ್, ಹುಕ್ಕೇರಿ ತಾಲೂಕಿನ‌ ಶಿರಹಟ್ಟಿ ಬಿ.ಕೆ. ಗ್ರಾಮದ ಬೀರಪ್ಪ ಲಕ್ಷ್ಮಣ ಹಣಗಂಡಿ, ಮೂಡಲಗಿ ‌ತಾಲೂಕಿನ ಅರಭಾವಿ ಗ್ರಾಮದ ಶಿವಾನಂದ ದುಂಡಪ್ಪ ಹಳ್ಳೂರ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಆ.7ರಂದು ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಗೋಕಾಕ್‌ನಲ್ಲಿ ಸ್ಮಾರ್ಟ್​ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರು.

ಈ ಬಗ್ಗೆ ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


0 تعليقات

إرسال تعليق

Post a Comment (0)

أحدث أقدم