ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು ತಾಲೂಕು ಕ.ಸಾ.ಪ.ಕ್ಕೆ ಜಿಲ್ಲಾಧ್ಯಕ್ಷರ ಭೇಟಿ

ಮಂಗಳೂರು ತಾಲೂಕು ಕ.ಸಾ.ಪ.ಕ್ಕೆ ಜಿಲ್ಲಾಧ್ಯಕ್ಷರ ಭೇಟಿ



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ಎಂ.ಪಿ. ಶ್ರೀನಾಥ್ ರವರು ಮಂಗಳೂರು ತಾಲೂಕು ಘಟಕಕ್ಕೆ, ಪದಗ್ರಹಣದ ಬಳಿಕ ಪ್ರಪ್ರಥಮ ಬಾರಿಗೆ ಅಧಿಕೃತ ಭೇಟಿ ನೀಡಿದರು.


ಅರ್ಥಪೂರ್ಣ ಸಂವಾದ ನಡೆಸಿ, ಸಾಹಿತ್ಯ ಚಟುವಟಿಕೆಗಳನ್ನು ಇನ್ನಷ್ಟು ಹೆಚ್ಚಿಸಲು, ಅರ್ಥಪೂರ್ಣ ಕಾರ್ಯಕ್ರಮಗಳನ್ನು ನಡೆಸಲು ಸಲಹೆ ಸೂಚನೆಗಳನ್ನು ನೀಡಿ ಮಂಗಳೂರು ತಾಲೂಕು ಘಟಕದ ಪದಾಧಿಕಾರಿಗಳನ್ನು ಹುರಿದುಂಬಿಸಿದರು.


ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಡಾ.ಮಂಜುನಾಥ ಎಸ್. ರೇವಣಕರ್ ರವರು ಸ್ವಾಗತಿಸಿ, ತಮ್ಮ ಘಟಕದ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ಜಿಲ್ಲಾಧ್ಯಕ್ಷರಿಗೆ ನೀಡಿದರಲ್ಲದೆ, ಮುಂದಿನ ಯೋಜನೆಗಳ ವಿವರ ನೀಡಿದರು.


ಕೋಶಾಧಿಕಾರಿ ಸುಬ್ರಾಯ ಭಟ್ಟರು ಪ್ರಸ್ತಾವಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡ ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯರು ಸಂವಾದದಲ್ಲಿ ಭಾಗವಹಿಸಿ ಜಿಲ್ಲಾಧ್ಯಕ್ಷರ ಭೇಟಿಯನ್ನು ಅರ್ಥಪೂರ್ಣವಾಗಿಸಿದರು. ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ ಯವರು ವಂದಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

0 تعليقات

إرسال تعليق

Post a Comment (0)

أحدث أقدم