ಬೆಂಗಳೂರು: ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.
ಅವರು ತಮ್ಮ ಮನೆಯಲ್ಲಿದ್ದಾಗ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಾತ್ರೂಮ್ನಲ್ಲಿ ಕುಸಿದುಬಿದ್ದಿದ್ದರು.
ಅವರು ಊಟ ಕೂಡ ಮಾಡಿರಲಿಲ್ಲ. ತಕ್ಷಣ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.
ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಅವರ ಆರೋಗ್ಯ ಸ್ಥಿತಿಯ ಮೇಲೆ ತೀವ್ರ ಗಮನ ಇರಿಸಿ, ಚಿಕಿತ್ಸೆ ನೀಡುತ್ತಿದ್ದರು. ಅದಾಗ್ಯೂ ಚಿಕಿತ್ಸೆ ಫಲಿಸದೆ ಅವರು ರಾತ್ರಿ 11 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.
Post a Comment