ಉಡುಪಿ: ಮಿಥುನ್ ರೈ ಗೆ ತಿರುಗೇಟು ಕೊಟ್ಟ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ, ಮಿಥುನ್ ರೈ ಒಬ್ಬ ಚಿಲ್ಲರೆ ಮನುಷ್ಯ ಅವನಿಗೆಲ್ಲಾ ನಾನು ಉತ್ತರ ಕೊಡುವುದಿಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಸೇವಾ ಪಾಕ್ಷಿಕದ ಅಂಗವಾಗಿ ಕಾಪು ಪೇಟೆಯಲ್ಲಿ ಖಾದಿ ಮೇಳವನ್ನು ಉದ್ಘಾಟಿಸಿದ ನಂತರ ಮಹಿಳಾಮೋರ್ಚಾ, ಯುವಮೋರ್ಚಾ ಕಾರ್ಯಕರ್ತರು ಸಚಿವೆಯೊಂದಿಗೆ ಸೆಲ್ಫಿ ತೆಗೆಯಲು ಮುಗಿ ಬಿದ್ದರು.
ಸಂಸದೆ ಹಾಗೂ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಸೆಲ್ಫಿ ಕಳಿಸಿದ ಜಿಲ್ಲೆಯ ಆಯ್ದ ಐವರು ವಿಜೇತರಿಗೆ ತಲಾ ₹ 5 ಸಾವಿರ ನಗದು ಬಹುಮಾನ ನೀಡುವುದಾಗಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಘೋಷಣೆ ಮಾಡಿದ ಬಗ್ಗೆ ಶುಕ್ರವಾರ ಉಡುಪಿಯಲ್ಲಿ ಪ್ರತಿಕ್ರಿಯಿಸಿದರು.
Post a Comment