ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮುರುಘಾ ಶ್ರೀ ಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮುರುಘಾ ಶ್ರೀ ಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

 


ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.


ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದ್ದು, ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಈ ವೇಳೆ ಸಂತ್ರಸ್ತೆಯರು ಕೋರ್ಟ್‌ ಹಾಜರಾಗಲಿದ್ದು, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.


ಮುರುಘಾ ಶ್ರೀ ಜಾಮೀನಿಗೆ ನಾಳೆ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. 


ಇವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.


0 تعليقات

إرسال تعليق

Post a Comment (0)

أحدث أقدم