ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೇ ಸಿಎಂ ಪೋಸ್ಟರ್ ಪ್ರಕರಣ; ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

ಪೇ ಸಿಎಂ ಪೋಸ್ಟರ್ ಪ್ರಕರಣ; ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

 



ಬೆಂಗಳೂರು : ಬೆಂಗಳೂರು 'ಪೇ ಸಿಎಂ ಪೋಸ್ಟರ್' ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಎಂಟಕ್ಕೆ ಏರಿದೆ.


ಈ ಬಗ್ಗೆ ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೊಲೀಸರು ಇದೀಗ ಮತ್ತೆ ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


ಬೆಳಗ್ಗೆ ಐವರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಸರ್ಕಾರ ವಿರುದ್ಧ ಶೇ 40 ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಮೂಲಕ ಬೃಹತ್ ಅಭಿಯಾನ ಆರಂಭಿಸಿದೆ.

ಸದ್ಯ ಈ ವಿಚಾರ ಬಿಜೆಪಿ-ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. ಪೋಸ್ಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದುವರೆಗೆ 8 ಮಂದಿಯನ್ನು ಬಂಧಿಸಿದ್ದಾರೆ

0 تعليقات

إرسال تعليق

Post a Comment (0)

أحدث أقدم