ಉಡುಪಿ: ಶಿಶು ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಹಾಗೂ ಶಿರಿಯಾರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಪೋಷಣ್ ಅಭಿಯಾನ ಕಾರ್ಯಕ್ರಮವು ಇತ್ತೀಚೆಗೆ ಶಿರಿಯಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಶು ಮತ್ತು ಮಹಿಳಾ ಯೋಜನಾ ಇಲಾಖೆಯ ವಲಯ ಮೇಲ್ವಿಚಾರಕಿ ಭಾಗೀರಥಿ ಪೋಷಣ್ ಅಭಿಯಾನ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮನ.ಕೆ, ಪಂಚಾಯತ್ ಸದಸ್ಯರಾದ ಪ್ರದೀಪ್ ಬಲ್ಲಾಳ್, ಹರೀಶ್ ಕಾಂಚನ್, ಚಂದ್ರ ಶೆಟ್ಟಿ, ಸಂಜೀವ ಪೂಜಾರಿ, ಗಾಯತ್ರಿ, ಭಾರತಿ ಹಾಗೂ ಮೀನಾಕ್ಷಿ, ಗ್ರಾಮ ಲೆಕ್ಕಾಧಿಕಾರಿ ಶರತ್ ಶೆಟ್ಟಿ, ಆರೋಗ್ಯ ಉಪಕೇಂದ್ರದ ಸಿಬ್ಬಂದಿಗಳು, ಶಾಲಾ ಮುಖ್ಯ ಶಿಕ್ಷಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಂಥಾಲಯ ಮೇಲ್ವಿಚಾರಕಿ, ಸಂಜೀವಿನಿ ಒಕ್ಕೂಟದ ಸದಸ್ಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ತಯಾರಿಸಿದ ವಿವಿಧ ಬಗೆಯ ಸಾಂಪ್ರದಾಯಿಕ ಆಹಾರ ತಿನಿಸುಗಳ ಪ್ರದರ್ಶನ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق