ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರವೀಣ್ ಹತ್ಯೆ ಪ್ರಕರಣ; ಪುತ್ತೂರು ಸುಳ್ಯ ಹಲವೆಡೆ ಎನ್ಐಎ ತಂಡದಿಂದ ಪರಿಶೀಲನೆ

ಪ್ರವೀಣ್ ಹತ್ಯೆ ಪ್ರಕರಣ; ಪುತ್ತೂರು ಸುಳ್ಯ ಹಲವೆಡೆ ಎನ್ಐಎ ತಂಡದಿಂದ ಪರಿಶೀಲನೆ

 



ದಕ್ಷಿಣ ಕನ್ನಡ:  ಜುಲೈ 26 ರಂದು ನಡೆದ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಇನ್ನು ಕೇಸ್ ತನಿಖೆ ನಡೆಯುತ್ತಲೇ ಇದೆ.

ಇದೀಗ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ.


ಸೆ.6ರಂದು ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳ ತಂಡ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.


ಮನೆ, ಕೆಲ ಖಾಸಗಿ ಕಟ್ಟಡಗಳು ಸೇರಿದಂತೆ ಒಟ್ಟು 32 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎನ್‌ಐಎ ಅಧಿಕಾರಿಗಳ ತಂಡ.

ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಯುತ್ತಿದ್ದು, ಎನ್​ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.


0 تعليقات

إرسال تعليق

Post a Comment (0)

أحدث أقدم