ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರವೀಣ್ ಹತ್ಯೆ ಪ್ರಕರಣ ; ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

ಪ್ರವೀಣ್ ಹತ್ಯೆ ಪ್ರಕರಣ ; ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೋದರನಿಂದ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಬೆದರಿಕೆ ಹಾಕಿದವನ ಬಂಧನಕ್ಕೆ ಆಗ್ರಹಿಸಿ ಬೆಳ್ಳಾರೆ ಠಾಣೆ ಎದುರು‌ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.


ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫಿಕ್ ಸೋದರ ಸಫ್ರಿದ್‌ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಫೋನ್ ಕರೆ ಮಾಡಿ ಹಿಂದೂ ಕಾರ್ಯಕರ್ತ ಪ್ರಶಾಂತ್ ರೈ ಎಂಬುವವರಿಗೆ ಬೆದರಿಕೆ ಹಾಕಿದ್ದಾನಂತೆ. ಪ್ರಶಾಂತ್ ರೈ, ಸಫ್ರಿದ್ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಫ್ರಿದ್ ಬಂಧನಕ್ಕೆ ಆಗ್ರಹಿಸಿ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದರು.


 ಇದೀಗ  ಆರೋಪಿ ಸಫ್ರೀದ್ ನನ್ನು ಮಂಗಳೂರಿನ ಬಜ್ಪೆಯಲ್ಲಿ ಪೋಲಿಸರು ಬಂದಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

0 Comments

Post a Comment

Post a Comment (0)

Previous Post Next Post