ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದು, ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿಎಲ್ ನ ಸುಮಾರು 3,800 ಕೋಟಿ ರೂ.ಗಳ 8 ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮಾಡಲಿದ್ದಾರೆ.
ಇಂದಿನ ಸಮಾವೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಸುಮಾರು 1 ಲಕ್ಷ ಮಂದಿ ಫಲಾನುಭವಿಗಳು ಹಾಗೂ ಒಂದು ಲಕ್ಷ ಮಂದಿ ಕಾರ್ಯಕರ್ತರು ಸೇರಿದಂತೆ ಸುಮಾರು 2 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ.
ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸೊರ್ಬಾನಂದ ಸೋನಾಪಾಲಾ, ಶಾಂತನು ಠಾಕೂರ್, ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು, ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.
ಮಂಗಳೂರಿನ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದ ಸುಮಾರುಉ 100 ಎಕರೆ ಪೈಕಿ 30 ಎಕರೆ ಜಾಗವನ್ನು ಸಮಾವೇಶಕ್ಕೆ ಬಳಸಿಕೊಳ್ಳಲಾಗಿದೆ. 25 ಎಕರೆ ಜಾಗಕ್ಕೆ ಪೆಂಡಲ್ ಹಾಕಲಾಗಿದ್ದು, 80 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ಆಗಮಿಸುವವರನ್ನು ಕರೆತರಲು ಸುಮಾರು 3 ಸಾವಿರ ಬಸ್, 1,400 ಕಾರು, 1 ಸಾವಿರ ಲಘು ವಾಹನ, 4,600 ದ್ವಿಚಕ್ರ ವಾಹನಗಳನ್ನು ಕಾಯ್ದಿರಿಸಲಾಗಿದೆ
Post a Comment