ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುತ್ತೂರು; ಕುಡಿದು ಬಸ್ ಗೆ ಹತ್ತಿದ ವ್ಯಕ್ತಿಗೆ ಬಸ್ ನಿರ್ವಾಹಕನಿಂದ ಹಲ್ಲೆ, ಬಸ್ ನಿರ್ವಾಹಕ ಅಮಾನತು

ಪುತ್ತೂರು; ಕುಡಿದು ಬಸ್ ಗೆ ಹತ್ತಿದ ವ್ಯಕ್ತಿಗೆ ಬಸ್ ನಿರ್ವಾಹಕನಿಂದ ಹಲ್ಲೆ, ಬಸ್ ನಿರ್ವಾಹಕ ಅಮಾನತು

 


ಪುತ್ತೂರು: ಬಸ್ ನಲ್ಲಿ ಪಾನಮತ್ತ ಎಂದು ಹೇಳಲಾದ ಪ್ರಯಾಣಿಕನಿಗೆ ಹಲ್ಲೆ ನಡೆಸಿ ಕಾಲಿನಿಂದ ದೂಡಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ನಿರ್ವಾಹಕನನ್ನು ಅಮಾನತು ಮಾಡಲಾಗಿದೆ.


'ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಬಸ್ಸಿನ ನಿರ್ವಾಹಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಅತನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ' ಎಂದು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.


'ನಿಗಮದ ಚಾಲನಾ ಸಿಬ್ಬಂದಿಗಳಿಗೆ ಸಾರ್ವಜನಿಕ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ನಿರಂತರ ತರಬೇತಿ ಹಾಗೂ ತಿಳುವಳಿಕೆ ನೀಡಿದ್ದಾಗ್ಯೂ ಸಹ ಈ ರೀತಿಯ ಘಟನೆ ನಡೆದಿರುವುದು ದುಃಖದ ಸಂಗತಿ.

ನಿಗಮದ ಸಿಬ್ಬಂದಿಗಳಿಗೆ‌ ಇನ್ನೂ‌ ಹೆಚ್ಚಿನ ತರಬೇತಿ ನೀಡಿ ಪ್ರಯಾಣಿಕರೊಡನೆ ಸೌಜನ್ಯವಾಗಿ ವರ್ತಿಸುವ ಸಂಬಂಧ ಕ್ರಮಕೈಗೊಳ್ಳಲಾಗುವುದು ಹಾಗೂ ಈ ರೀತಿಯ ಘಟನೆಗಳಿಗೆ ಕಾರಣರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಲಾಗಿದೆ' ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0 Comments

Post a Comment

Post a Comment (0)

Previous Post Next Post