ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಪತ್ರಕರ್ತ ಕೆ. ಸತ್ಯನಾರಾಯಣ ವಿಧಿವಶ

ಹಿರಿಯ ಪತ್ರಕರ್ತ ಕೆ. ಸತ್ಯನಾರಾಯಣ ವಿಧಿವಶ


ಬೆಂಗಳೂರು: ಹಿರಿಯ ಪತ್ರಕರ್ತ ಕೆ ಸತ್ಯ ನಾರಾಯಣ ಅವರು ಇಂದು ಮುಂಜಾನೆ ವಿಧಿವಶರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಓರ್ವ ಪುತ್ರಿ ಇದ್ದಾರೆ.

ಸಂಯುಕ್ತ ಕರ್ನಾಟಕದ ಮುಖಾಂತರ 1965ರಲ್ಲಿ ಕರಡು ತಿದ್ದುವವರಾಗಿ (ಪ್ರೂಫ್‌ ರೀಡರ್‌) ಪತ್ರಿಕಾ ಕ್ಷೇತ್ರ ಪ್ರವೇಶಿಸಿ, ಅಲ್ಲೇ ಸಹ ಸಂಪಾದಕರಾಗಿ ಅನಂತರ ಕನ್ನಡ ಪ್ರಭದಲ್ಲಿ ಸಹಾಯಕ ಸಂಪಾದಕರಾಗಿ ಮತ್ತೆ ಸಂಯುಕ್ತ ಕರ್ನಾಟಕಕ್ಕೆ ವಾಪಸಾಗಿದ್ದರು. ಅನಂತರ ವಿಜಯ ಕರ್ನಾಟಕ, ಸುವರ್ಣ ಟೈಮ್ಸ್ ಆಫ್ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ ಕೆ ಸತ್ಯ ನಾರಾಯಣ ಅವರು ಹೃದಯಾಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಅಂತ್ಯ ಸಂಸ್ಕಾರವು ಭಾನುವಾರ ಬೆಳಿಗ್ಗೆ ಹತ್ತು ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم