ಚಿತ್ರದುರ್ಗ: ಪೊಲೀಸರ ಬಂಧನದಲ್ಲಿದ್ದ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರು ಎದೆನೋವಿನಿಂದ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆ ಅಡಿ ಶಿವಮೂರ್ತಿ ಮುರುಘಾ ಶರಣರನ್ನು ನಿನ್ನೆ ಬಂಧಿಸಲಾಗಿದೆ.
ಇಂದು ಬೆಳಗ್ಗೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಪೊಲೀಸರು ಕೂಡಲೇ ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದಾರೆ.
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
Post a Comment