ಮಂಗಳೂರು: ಯುವಜನರ ದೈಹಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಕ್ರೀಡಾ ಚಟುವಟಿಕೆ ಬಹು ಮುಖ್ಯ ಭೂಮಿಕೆ ವಹಿಸುತ್ತದೆ. ವೃತ್ತಿಯ ಜೊತೆಗೆ ನಿರಂತರವಾಗಿ ಕ್ರೀಡಾ ಚಟುವಟಿಕೆ ಮತ್ತು ದೈಹಿಕ ಕಸರತ್ತಿನ ಆಟೋಟಗಳಲ್ಲಿ ಭಾಗ ವಹಿಸುವುದರಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ ಮತ್ತು ಆತ್ಮ ವಿಶ್ವಸವನ್ನು ಹೆಚ್ಚಿಸುತ್ತದೆ. ಈ ನಿಟ್ಟಿನಲ್ಲಿ ಗೃಹರಕ್ಷಕರು ತಮ್ಮ ದೈನಂದಿನ ಕರ್ತವ್ಯದ ನಡುವೆಯೂ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ದೈಹಿಕ ಕ್ಷಮತೆ ಕಾಪಾಡಿಕೊಳ್ಳುವುದು ಸ್ವಾಗತಾರ್ಹ ಎಂದು ಅಭಿಪ್ರಾಯಪಟ್ಟರು.
ಇತ್ತೀಚಿಗೆ ಮಂಗಳೂರಿನ ಮಂಗಳಾ ಮೈದಾನದಲ್ಲಿ ಮಂಗಳೂರು ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ನಡೆದ ದಕ್ಷಿಣ ಕನ್ನಡ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ 30 ವರ್ಷಗಳಿಗಿಂತ ಮೇಲ್ಪಟ್ಟ ಮಹಿಳೆಯರ ವಿಭಾಗದಲ್ಲಿ 200 ಮತ್ತು 800 ಮೀಟರ್ ಓಟದಲ್ಲಿ ಚಿನ್ನ ಮತ್ತು ಲಾಂಗ್ ಜಂಪ್ ನಲ್ಲಿ ಬೆಳ್ಳಿ ಪದಕ ಗೆದ್ದು ಉಳ್ಳಾಲ ಗೃಹರಕ್ಷಕದಳ ಘಟಕದ ಹಿರಿಯ ಗೃಹರಕ್ಷಕಿ ದಿವ್ಯಾ ಪೂಜಾರಿ, ಮೆಟಲ್ ನಂ 69, ಅವರನ್ನು ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಮತ್ತು ಪೌರರಕ್ಷಣಾ ಪಡೆಯ ಮುಖ್ಯ ಪಾಲಕ ಡಾ|| ಮುರಲೀ ಮೋಹನ್ ಚೂಂತಾರು ಅವರು ದಿವ್ಯಾ ಅವರನ್ನು ಸನ್ಮಾನಿಸಿ ಮುಂದೆ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯೂ ಚಿನ್ನ ಗೆದ್ದು ಜಿಲ್ಲಾ ಗೃಹರಕ್ಷಕದಳದ ಕೀರ್ತಿಯನ್ನು ಹೆಚ್ಚಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಉಪ ಸಮಾದೇಷ್ಟರಾದ ಶ್ರೀ ರಮೇಶ್, ಕಛೇರಿ ಅಧೀಕ್ಷಕ ಶ್ರೀ ರತ್ನಾಕರ, ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ. ಎಸ್, ದಲಾಯತ್ ಮೀನಾಕ್ಷಿ, ಉಳ್ಳಾಲ ಘಟಕದ ಹಿರಿಯ ಗೃಹರಕ್ಷಕರಾದ ಸುನೀಲ್ ಪೂಜಾರಿ, ಅಬ್ದುಲ್ ಹಮೀದ್, ರಂಜಿತ್ ಮತ್ತು ಮಂಗಳೂರು ಘಟಕದ ಸುನೀಲ್ ಕುಮಾರ್, ದಿವಾಕರ್, ಜ್ಞಾನೇಶ್ ಮತ್ತು ಜಯಲಕ್ಷ್ಮಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق