ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುತ್ತೂರು: ಸುದಾನ ಶಾಲೆಯಲ್ಲಿ ಮಕ್ಕಳ ಸುರಕ್ಷಾ ಸಮಿತಿಯಿಂದ “ಜಾಗೃತಿ” ಕಾರ್ಯಾಗಾರ

ಪುತ್ತೂರು: ಸುದಾನ ಶಾಲೆಯಲ್ಲಿ ಮಕ್ಕಳ ಸುರಕ್ಷಾ ಸಮಿತಿಯಿಂದ “ಜಾಗೃತಿ” ಕಾರ್ಯಾಗಾರ


ಪುತ್ತೂರು: ಸುದಾನ ಶಾಲಾ ಮಕ್ಕಳ ಸುರಕ್ಷಾ ಸಮಿತಿಯ ವತಿಯಿಂದ ಬುಧವಾರ (ಸೆ.7) ವಿದ್ಯಾರ್ಥಿಗಳಿಗಾಗಿ ಮಾನಸಿಕ ಭಾವನಾತ್ಮಕ ಸ್ಥಿರತೆಯನ್ನು ಕಾಪಾಡಿಕೊಳ್ಳುವ ವಿಷಯವಾಗಿ ‘ಜಾಗೃತಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನ ರೋಶನಿ ನಿಲಯದ ಸ್ನಾತಕೋತ್ತರ ಮಾನಸಿಕ ಆರೋಗ್ಯ ವಿಭಾಗದ ನಿವೃತ್ತ ಪ್ರೊಫೆಸರ್‌ ಹಾಗೂ ಡೀನ್‌ ಆಗಿರುವ ಡಾ. ರಮೀಲಾ ಶೇಖರ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಕಲಿಕೆಯ ಸರಳ ಹಂತಗಳು, ಅತಿಯಾದ ಮೊಬೈಲ್, ಅಂತರ್ಜಾಲ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆಯೂ ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟು ಸೂಕ್ತ ಮಾರ್ಗದರ್ಶನ ನೀಡಿದರು.


ಅತಿ ಉಪಯುಕ್ತವಾಗಿದ್ದ ಈ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಡಾ| ರಾಜೇಶ್ ಬೆಜ್ಜಂಗಳ, ಮಕ್ಕಳ ಸುರಕ್ಷತಾ ಸಮಿತಿಯ ಅಧ್ಯಕ್ಷರಾಗಿರುವ ಶ್ರೀ ಮಾಮಚ್ಚನ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶೋಭಾ ನಾಗರಾಜ್, ಮಕ್ಕಳ ಸುರಕ್ಷಾ ಸಮಿತಿಯ ಸದಸ್ಯರಾದ ಶ್ರೀಮತಿ ಪ್ರತಿಮಾ ಎನ್.ಜಿ, ಶ್ರೀಮತಿ ಪೂಜಾ ಎಂ. ವಿ, ಶ್ರೀಮತಿ ದಿವ್ಯಾ ಡೇಸಾ, ವಿದ್ಯಾರ್ಥಿನಿ ಪ್ರತಿನಿಧಿಗಳಾದ ಸಾನ್ವಿ ರೈ, ನಿಹಾರಿಕಾ ಎನ್.ರೈ ಉಪಸ್ಥಿತರಿದ್ದರು.


ಈ ಕಾರ್ಯಕ್ರಮವು 7ನೇ ತರಗತಿ ಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿತ್ತು. ಶ್ರೀಮತಿ. ದಿವ್ಯಾಡೇಸಾ ಕಾರ್ಯಕ್ರಮ ನಿರೂಪಿಸಿ, ಮುಖ್ಯೋಪಾಧ್ಯಾಯಿನಿ ಶ್ರೀಮತಿ. ಶೋಭಾ ನಾಗರಾಜ್ ಮುನ್ನುಡಿಯೊಂದಿಗೆ ಸ್ವಾಗತಿಸಿ,  ಸಾನ್ವಿ ರೈ (10ನೇ ತರಗತಿ) ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم