ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮುರುಘಾ ಮಠದ ಶ್ರೀ ಗಳ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ವೇದಿಕೆಯಿಂದ ಸುಮೋಟೋ ಕೇಸ್ ದಾಖಲು

ಮುರುಘಾ ಮಠದ ಶ್ರೀ ಗಳ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ವೇದಿಕೆಯಿಂದ ಸುಮೋಟೋ ಕೇಸ್ ದಾಖಲು

 


ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ.


ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಎಸ್ ಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ.


 ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪ್ರಕರಣದ ವರದಿ ನೀಡುವಂತೆ ಚಿತ್ರದುರ್ಗದ ಎಸ್ ಪಿ ಗೆ ನೋಟಿಸ್ ನೀಡಿದೆ.


ನೋಟಿಸ್ ತಲುಪಿದ ಏಳು ದಿನಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿದ್ದು, ಪೋಲೀಸರು ಕೈಗೊಂಡ ಕ್ರಮದ ಬಗ್ಗೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಮಾಹಿತಿ ಕೇಳಿದೆ. ಈ ಮೂಲಕ ಮುರುಘಾಮಠದ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.


0 تعليقات

إرسال تعليق

Post a Comment (0)

أحدث أقدم