ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಾಯಿ ನಿಧನ

ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಾಯಿ ನಿಧನ

 


ಹೈದರಾಬಾದ್:‌ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.


ಇಂದಿರಾ ದೇವಿ ಕಳೆದ ಕೆಲವು ವಾರಗಳಿಂದ ಅಸ್ವಸ್ಥರಾಗಿದ್ದು, ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.


ಇಂದು ಮುಂಜಾನೆ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.


ಕೃಷ್ಣ ಹಾಗೂ ಇಂದಿರಾದೇವಿಗೆ ರಮೇಶ್ ಬಾಬು ಮತ್ತು ಮಹೇಶ್ ಬಾಬು ಇಬ್ಬರು ಗಂಡು ಮಕ್ಕಳು ಹಾಗೂ ಪದ್ಮಾವತಿ, ಮಂಜುಳಾ ಮತ್ತು ಪ್ರಿಯದರ್ಶಿನಿ ಮೂವರು ಹೆಣ್ಮಕ್ಕಳು ಇದ್ದಾರೆ.


ಕೆಲ ತಿಂಗಳ ಹಿಂದೆ ರಮೇಶ್ ಬಾಬು ಕೂಡ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತಾಯಿ ಇಂದಿರಾದೇವಿ ಕೊನೆಯುಸಿರೆಳೆದಿದ್ದಾರೆ.


0 تعليقات

إرسال تعليق

Post a Comment (0)

أحدث أقدم