ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಿಧನ

 


ಅಂಕೋಲಾ: ತಾಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಾಯಕ (102) ಅವರು ವಯೋಸಹಜ ಅನಾರೋಗ್ಯದಿಂದ ತಮ್ಮ ಸ್ವಗೃಹ ಸೂರ್ವೆಯಲ್ಲಿ ನಿಧನ ಹೊಂದಿದರು. 


ಕಳೆದ 2-3 ದಿನಗಳ ಹಿಂದೆ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ವೆಂಟಿಲೇಟರ್ ಚಿಕಿತ್ಸೆ ನೀಡಿ ನಂತರ ಮನೆಗೆ ಕರೆದುಕೊಂಡು ಬರಲಾಗಿತ್ತು.


ವೆಂಕಣ್ಣ ನಾಯಕ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ವಿಧಾನಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕಿ ರೂಪಾಲಿ ನಾಯ್ಕ, ಶಾಸಕ ಆರ್ ವಿ ದೇಶಪಾಂಡೆ, ಮಾಜಿ ಸಂಸದೆ ಮಾರ್ಗರೇಟ್ ಆಳ್ವ, ಮಾಜಿ ಶಾಸಕರಾದ ಸತೀಶ್ ಸೈಲ್, ಆನಂದ ಅಸ್ನೋಟಿಕರ ಸೇರಿದಂತೆ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಅಧಿಕಾರಿ ವರ್ಗ, ವಿವಿಧ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.


 ಮೃತರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ 8.30ಕ್ಕೆ ಸೂರ್ವೆಯಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.


0 Comments

Post a Comment

Post a Comment (0)

Previous Post Next Post