ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದೇವರ ಮೇಲೆ ಕಾಲಿಟ್ಟು ಪೂಜೆ ಮಾಡುವ ವಿಚಿತ್ರ ಅರ್ಚಕ; ವಿಡಿಯೋ ವೈರಲ್

ದೇವರ ಮೇಲೆ ಕಾಲಿಟ್ಟು ಪೂಜೆ ಮಾಡುವ ವಿಚಿತ್ರ ಅರ್ಚಕ; ವಿಡಿಯೋ ವೈರಲ್

 


ದಾವಣಗೆರೆ: ಶಾಸಕ ಎಂ‌ಪಿ. ರೇಣುಕಾಚಾರ್ಯ ಕ್ಷೇತ್ರ ಹೊನ್ನಾಳಿ ತಾಲೂಕು ಕತ್ತಿಗೆ ಗ್ರಾಮದಲ್ಲಿ ದೇವಸ್ಥಾನದ ಅರ್ಚಕ ದೇವರಿಗೆ ವಿಚಿತ್ರ ಪೂಜೆ ಮಾಡುತ್ತಿದ್ದಾರೆ.

ದೇವರ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುವ ಮೂಲಕ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ದೇವರಿಗೆ ಪೂಜೆ ಮಾಡುವ ಅರ್ಚಕನೇ ಈ ರೀತಿ ಮಾಡಿದರೆ ಹೇಗೆ? ಎಂದು ಜನಸಾಮನ್ಯರು ಪ್ರಶ್ನೆ ಮಾಡುತ್ತಿದ್ದಾರೆ. ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ಮಹೇಶ್ವರಯ್ಯ ಎಂಬ ಅರ್ಚಕ ವಿಚಿತ್ರ ಪೂಜೆಯಿಂದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


ಬೇಡರ ಕಣ್ಣಪ್ಪ ಶಿವನಿಗೆ ಒಂದು ಕಣ್ಣು ದಾನ ಕೊಟ್ಟು ಇನ್ನೊಂದು ಕಣ್ಣು ಕೊಡಲು ಶಿವಲಿಂಗದ ಮೇಲೆ ಕಾಲಿಡುವಂತೆ ಈ ಅರ್ಚಕ ಮಹೇಶ್ವರಯ್ಯ, ಆಂಜನೇಯ ಸ್ವಾಮೀ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುತ್ತಾರೆ.

ಅರ್ಚಕನ ಪೂಜೆ ವಿಧಾನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಅನೇಕರು ಅರ್ಚಕನ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.


0 تعليقات

إرسال تعليق

Post a Comment (0)

أحدث أقدم